Gruhalakshmi – 6ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000/- ಹಣ ಈ ತಾರೀಕಿಗೆ ಜಮಾ! ಇಲ್ಲಿದೆ ಹೊಸ ಅಪ್ಡೇಟ್

 

Gruhalakshmi – 6ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000/- ಹಣ ಈ ತಾರೀಕಿಗೆ ಜಮಾ! ಇಲ್ಲಿದೆ ಹೊಸ ಅಪ್ಡೇಟ್

ರಾಜ್ಯ ಸರ್ಕಾರ ( State Government ) ಐದು ಗ್ಯಾರಂಟಿ ಯೋಜನೆಗಳನ್ನು (Guarantee Scheme ) ಜಾರಿಗೊಳಿಸಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಈ ಗೃಹಲಕ್ಷ್ಮೀ ಯೋಜನೆಯು ( Gruha Lakshmi Scheme Karnataka ) ಬಹಳ ಉಪಯೋಗವಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಹಣವನ್ನು ಮನೆಯ ಯಜಮಾನಿಗೆ ನೀಡಲಾಗುತ್ತದೆ. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಬೇಕು ಎಂದು ಸರ್ಕಾರವು ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ( Every Month ) ರೂ.2,000 ಜಮಾ ಮಾಡಲು ಈ ಯೋಜನೆ ಅನುಷ್ಠಾನ ಮಾಡಿದೆ. ಗೃಹಲಕ್ಷ್ಮಿ ಯೋಜನೆಯು ಬಹುತೇಕ ಎಲ್ಲ ಜಿಲ್ಲೆಗಳ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ನಾಲ್ಕು ಕಂತುಗಳನ್ನು ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಜನವರಿ ಹತ್ತರಂದು 5ನೇ ಕಂತಿನ ಹಣವು ಕೂಡ ಬಿಡುಗಡೆಯಾಗಿದೆ. ಈಗಾಗಲೇ ಐದು ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೂ ಕೂಡ ಹಣ ವರ್ಗಾವಣೆಯಾಗಿದೆ.

5ನೇ ಕಂತಿನ ಹಣ ( 5th installment money ) ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡಿ

1. ಈಗಾಗಲೇ ಸರ್ಕಾರ ತಿಳಿಸಿರುವಂತೆ 5ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಾರದೇ ಇದ್ದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar seeding) ಆಗಿದ್ಯೋ ಇಲ್ಲವೋ ಎಂಬುದನ್ನು ಚೆಕ್ ( Check ) ಮಾಡಿ ಕೊಳ್ಳಬೇಕು.

2. ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ( post office ) ಹೊಸ ಖಾತೆಯನ್ನು ಆರಂಭಿಸಿ. ಅದಕ್ಕೆ ಬೇಕಾದ ದಾಖಲೆಗಳನ್ನು ನೀಡಿದರೆ. ನಿಮ್ಮ ಬ್ಯಾಂಕ್ ಖಾತೆಗೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿಯ ಯೋಜನೆಯ ಎಲ್ಲಾ ಕಂತಿನ ಹಣವು ಜಮಾ ಆಗುತ್ತದೆ.

ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬೇಕು (Check your DBT status) :

ಹಾಗೆಯೇ ಇನ್ನೊಂದು ಮುಖ್ಯ ವಿಚಾರ ಎಂದರೆ, ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಮಾಹಿತಿ ಕಣಜ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಸಂಖ್ಯೆಯನ್ನು ಹಾಕಿ ತಿಳಿದುಕೊಳ್ಳಬಹುದು. ಅಥವಾ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ DBT Karnataka mobile ಅಪ್ಲಿಕೇಶನ್ ( Application ) ಮೂಲಕ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯೋ ಇಲ್ವೋ ಅಂತ ಚೆಕ್ ಮಾಡಿಕೊಳ್ಳಬಹುದು. ಇದೊಂದು ಉತ್ತಮ ವಿಚಾರವಾಗಿದೆ.

6ನೇ ಕಂತಿನ ಹಣ ( 6th installment money ) ಜಮಾ ಆಗುವ ದಿನಾಂಕ 

ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವನ್ನು ಬಹಳಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಾಗೆಯೇ ಇನ್ನು ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕು. ಹಾಗೆಯೇ 6ನೇ ಕಂತಿನ ಹಣ ಬಿಡುಗಡೆ ಫೆಬ್ರವರಿ ( February ) ತಿಂಗಳಿನ ಮೊದಲ ವಾರದಲ್ಲಿ ಆಗಬಹುದು ಎಂಬ ಮಾಹಿತಿ ತಿಳಿದು ಬಂದಿದೆ.

ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ತಿಂಗಳಿನಲ್ಲಿ ಬಿಡುಗಡೆ ಆಗುತ್ತದೆ. ಹೌದು, ಈ ಹಿಂದೆ ಡಿಸೆಂಬರ್ ( December ) ತಿಂಗಳಲ್ಲಿ ಬಿಡುಗಡೆ ಆಗುತ್ತದೆ ಎಂದು ತಿಳಿಸಿದ್ದರು. ನಂತರ ಅದೇ ಹಣ ಜನವರಿಯಲ್ಲಿ ( January ) ಬಿಡುಗಡೆ ಆಗುತ್ತದೆ ಎಂದು ತಿಳಿಸದ್ದರು. ಆದರೆ ಇದೀಗ ಹಣ ಫೆಬ್ರವರಿಯಲ್ಲಿ ಫಲಾನುಭವಿಗಳ ಖಾತೆ ತಲುಪಲಿದೆ ಎಂದು ತಿಳಿಸಿದ್ದಾರೆ.



Comments